Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:13 - ಪರಿಶುದ್ದ ಬೈಬಲ್‌

13 ದಾವೀದನು ಕಣಿವೆಯ ಮತ್ತೊಂದು ಕಡೆಗೆ ಹೋಗಿ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ದಾವೀದನ ಮತ್ತು ಸೌಲನ ಪಾಳೆಯಗಳಿಗೆ ತುಂಬಾ ಅಂತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:13
4 ತಿಳಿವುಗಳ ಹೋಲಿಕೆ  

ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,


ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾಮನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾಮನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.


ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.


ದಾವೀದನು ಸೌಲನ ಸೈನ್ಯವನ್ನೂ ನೇರನ ಮಗನಾದ ಅಬ್ನೇರನನ್ನೂ ಉದ್ದೇಶಿಸಿ, “ಅಬ್ನೇರನೇ, ನನಗೆ ಉತ್ತರಿಸು” ಎಂದು ಕೂಗಿಕೊಂಡನು. ಅಬ್ನೇರನು, “ನೀನು ಯಾರು? ರಾಜನನ್ನು ನೀನು ಕರೆಯುತ್ತಿರುವುದೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು