Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:16 - ಪರಿಶುದ್ದ ಬೈಬಲ್‌

16 ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಹೀಗೆ ಮಾಡುವದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:16
11 ತಿಳಿವುಗಳ ಹೋಲಿಕೆ  

ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.


ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.


ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.


ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!


ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.


ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.


ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು.


ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು