1 ಸಮುಯೇಲ 26:17 - ಪರಿಶುದ್ದ ಬೈಬಲ್17 ದಾವೀದನ ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಎಂದು ಕೇಳಲು ಅವನು - ಅರಸನೇ, ನನ್ನ ಒಡೆಯನೇ, ಹೌದು ನನ್ನ ಸ್ವರವೇ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು. ಅಧ್ಯಾಯವನ್ನು ನೋಡಿ |