Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:18 - ಪರಿಶುದ್ದ ಬೈಬಲ್‌

18 ದಾವೀದನು, “ಒಡೆಯನೇ, ನನ್ನನ್ನೇಕೆ ಅಟ್ಟಿಸಿಕೊಂಡು ಬರುತ್ತಿರುವೆ? ನಾನು ಮಾಡಿರುವ ತಪ್ಪಾದರೂ ಏನು? ನಾನು ತಪ್ಪಿತಸ್ಥನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಸ್ವಾವಿುಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವದೇಕೆ? ನಾನೇನು ಮಾಡಿದೆನು? ಯಾವ ಪಾಪಕ್ಕೆ ಕೈಹಾಕಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:18
12 ತಿಳಿವುಗಳ ಹೋಲಿಕೆ  

“‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?


ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ಅದಕ್ಕೆ ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು.


ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.


ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು