Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:4 - ಪರಿಶುದ್ದ ಬೈಬಲ್‌

4 ಆಗ ದಾವೀದನು ಗೂಢಚಾರರನ್ನು ಕಳುಹಿಸಿದನು. ಸೌಲನು ಹಕೀಲಾಕ್ಕೆ ಬಂದಿರುವುದು ದಾವೀದನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಕೂಡಲೆ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಖಚಿತಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಕೂಡಲೆ ಗೂಢಚಾರರನ್ನು ಕಳುಹಿಸಿ ಸೌಲನು ಇಳುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:4
4 ತಿಳಿವುಗಳ ಹೋಲಿಕೆ  

“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಸೌಲನು ಹಕೀಲಾ ಬೆಟ್ಟದ ಮೇಲೆ ತನ್ನ ಪಾಳೆಯವನ್ನು ಮಾಡಿಕೊಂಡನು. ಈ ಪಾಳೆಯವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿರುವ ರಸ್ತೆಯ ಅಂಚಿನಲ್ಲಿತ್ತು. ದಾವೀದನು ಅರಣ್ಯದಲ್ಲಿ ನೆಲೆಸಿದ್ದನು. ಸೌಲನು ತನ್ನನ್ನು ಹಿಂಬಾಲಿಸಿಕೊಂಡು ಅಲ್ಲಿಗೆ ಬಂದಿರುವುದು ದಾವೀದನಿಗೆ ತಿಳಿಯಿತು.


ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ನೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು