1 ಸಮುಯೇಲ 26:6 - ಪರಿಶುದ್ದ ಬೈಬಲ್6 ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು. ಅಧ್ಯಾಯವನ್ನು ನೋಡಿ |
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.