1 ಸಮುಯೇಲ 26:7 - ಪರಿಶುದ್ದ ಬೈಬಲ್7 ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಭರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ನೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು. ಅಧ್ಯಾಯವನ್ನು ನೋಡಿ |
ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.