1 ಸಮುಯೇಲ 27:1 - ಪರಿಶುದ್ದ ಬೈಬಲ್1 ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.