1 ಸಮುಯೇಲ 27:11 - ಪರಿಶುದ್ದ ಬೈಬಲ್11 ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿ |
ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.
ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ.