Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:2 - ಪರಿಶುದ್ದ ಬೈಬಲ್‌

2 ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:2
7 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.


ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು.


ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.


ದಾವೀದನು ತನ್ನ ಆರುನೂರು ಜನರೊಂದಿಗೆ ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದುದರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು.


ದಾವೀದನು ಚಿಕ್ಲಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಲಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು.


ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು