Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:3 - ಪರಿಶುದ್ದ ಬೈಬಲ್‌

3 ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲೆಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೇಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನೂ ಅವನ ಜನರೂ ತಮ್ಮತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಿಸಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:3
7 ತಿಳಿವುಗಳ ಹೋಲಿಕೆ  

ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದುಕೊಂಡು ಹೋಗಿದ್ದರು.


ದಾವೀದನು ಮತ್ತು ಅವನ ಜನರು ಚಿಕ್ಲಗಿಗೆ ಬಂದರು. ನಗರವು ಸುಡುತ್ತಿರುವುದನ್ನು ಅವರು ನೋಡಿದರು. ಅವರ ಹೆಂಡತಿಯರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅಲ್ಲಿರಲಿಲ್ಲ. ಅಮಾಲೇಕ್ಯರು ಅವರನ್ನು ಎಳೆದುಕೊಂಡು ಹೋಗಿದ್ದರು.


ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.


ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.


ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು