5 ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು.
5 ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.
5 ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.
5 ಒಂದು ದಿನ ದಾವೀದನು ಆಕೀಷನಿಗೆ - ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿರುವದಾದರೆ ಯಾವದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸು, ನಾನು ಅಲ್ಲಿ ವಾಸಿಸುವೆನು ಅನ್ನಲು
5 ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.