Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:8 - ಪರಿಶುದ್ದ ಬೈಬಲ್‌

8 ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:8
22 ತಿಳಿವುಗಳ ಹೋಲಿಕೆ  

ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.


ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.


ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರೆಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.


ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ರೆಫೀದೀಮಿನಲ್ಲಿ ಅಮಾಲೇಕ್ಯರು ಬಂದು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಿದರು.


ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.


ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.


ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.


ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ಯೋವಾಬನೂ ದಾವೀದನ ಅಧಿಕಾರಿಗಳೂ ಯುದ್ಧರಂಗದಿಂದ ಹಿಂದಿರುಗಿದರು. ಶತ್ರುಗಳಿಂದ ವಶಪಡಿಸಿಕೊಂಡ ಅನೇಕ ಬೆಲೆಬಾಳುವ ವಸ್ತುಗಳು ಅವರ ಹತ್ತಿರವಿದ್ದವು. ದಾವೀದನು ಅಬ್ನೇರನನ್ನು ಆಗಲೇ ಸಮಾಧಾನದಿಂದ ಕಳುಹಿಸಿಕೊಟ್ಟಿದ್ದರಿಂದ ಯೋವಾಬನು ಬಂದಾಗ ಅವನು ಹೆಬ್ರೋನಿನಲ್ಲಿರಲಿಲ್ಲ.


ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು