Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:12 - ಪರಿಶುದ್ದ ಬೈಬಲ್‌

12 ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:12
5 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.


ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.


ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.


ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು.


ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು