1 ಸಮುಯೇಲ 28:15 - ಪರಿಶುದ್ದ ಬೈಬಲ್15 ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು. ಅಧ್ಯಾಯವನ್ನು ನೋಡಿ |