1 ಸಮುಯೇಲ 28:19 - ಪರಿಶುದ್ದ ಬೈಬಲ್19 ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನು ನಿನ್ನ ಕೂಡ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ; ಆತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |