1 ಸಮುಯೇಲ 28:23 - ಪರಿಶುದ್ದ ಬೈಬಲ್23 ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |