1 ಸಮುಯೇಲ 28:3 - ಪರಿಶುದ್ದ ಬೈಬಲ್3 ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು. ಅಧ್ಯಾಯವನ್ನು ನೋಡಿ |