Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:7 - ಪರಿಶುದ್ದ ಬೈಬಲ್‌

7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:7
13 ತಿಳಿವುಗಳ ಹೋಲಿಕೆ  

ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.


ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.


ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ, ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು