Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:8 - ಪರಿಶುದ್ದ ಬೈಬಲ್‌

8 ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಸೌಲನು ವಸ್ತ್ರಾದಿಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆ ಸೇರಿ - ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು; ನಾನು ಯಾವನ ಹೆಸರನ್ನು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು ಎಂದು ಆಕೆಯನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:8
12 ತಿಳಿವುಗಳ ಹೋಲಿಕೆ  

ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.


ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.


ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು