ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.
ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.
ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.
ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.
ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.
ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.
ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.
ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.