ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.
ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.
ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.