Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:2 - ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಿಲಿಷ್ಟಿಯ ರಾಜರುಗಳ ಸೈನಿಕರು ನೂರು ನೂರು ಮಂದಿಯಾಗಿ ಹಾಗು ಸಾವಿರ ಸಾವಿರ ಮಂದಿಯಾಗಿ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಭಾಗದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂದಳದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:2
7 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು