Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:3 - ಪರಿಶುದ್ದ ಬೈಬಲ್‌

3 ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಫಿಲಿಷ್ಟಿಯ ರಾಜರು, “ಈ ಹಿಬ್ರಿಯರು ಏಕೆ?” ಎಂದು ಆಕೀಷನನ್ನು ಕೇಳಿದರು. “ಈತ, ಇಸ್ರಯೇಲರ ಅರಸನಾದ ಸೌಲನ ಸೇವಕನಾದ ದಾವೀದನಲ್ಲವೇ? ಇವನು ಇಷ್ಟು ವರ್ಷ, ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲೇ ಇದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ,” ಎಂದು ಆಕೀಷನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:3
13 ತಿಳಿವುಗಳ ಹೋಲಿಕೆ  

ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.


ದಾವೀದನು ಫಿಲಿಷ್ಟಿಯರೊಂದಿಗೆ ಒಂದು ವರ್ಷ ನಾಲ್ಕು ತಿಂಗಳು ವಾಸಮಾಡಿದನು.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.


ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.


ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.


ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು