Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:4 - ಪರಿಶುದ್ದ ಬೈಬಲ್‌

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:4
8 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನರೊಂದಿಗೆ ಸೇರಿಕೊಂಡರು.


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.


ಆಕೀಷನು, “ನೀನು ಒಳ್ಳೆಯವನೆಂದು ನಾನು ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು, ‘ದಾವೀದನು ನಮ್ಮ ಜೊತೆ ಯುದ್ಧಕ್ಕೆ ಬರುವಂತಿಲ್ಲ’ ಎಂದು ಈಗಲೂ ಹೇಳುತ್ತಿದ್ದಾರೆ.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.


ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು