Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:5 - ಪರಿಶುದ್ದ ಬೈಬಲ್‌

5 ದಾವೀದನೆಂಬ ಈ ವ್ಯಕ್ತಿಯನ್ನು ಕುರಿತು, ಇಸ್ರೇಲರು ಕುಣಿಯುತ್ತಾ ಹಾಡುವ ಹಾಡು ಹೀಗಿದೆ: ‘ಸೌಲನು ಸಾವಿರಗಟ್ಟಲೆ ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರಗಟ್ಟಲೆ ಶತ್ರುಗಳನ್ನು ಕೊಂದನು!’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ‘ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,’ ಎಂದು ಮಹಿಳೆಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತು ಅಲ್ಲವೇ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಸ್ತ್ರೀಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತಲ್ಲವೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸ್ತ್ರೀಯರು ತಮ್ಮ ನೃತ್ಯಗಳಲ್ಲಿ ಹಾಡಿದ ದಾವೀದನು ಇವನಲ್ಲವೇ: “ ‘ಸೌಲನು ಸಾವಿರ ಜನರನ್ನೂ, ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:5
4 ತಿಳಿವುಗಳ ಹೋಲಿಕೆ  

ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.


ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು