Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:18 - ಪರಿಶುದ್ದ ಬೈಬಲ್‌

18 ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:18
18 ತಿಳಿವುಗಳ ಹೋಲಿಕೆ  

ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.


ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.


ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.


ಆದ್ದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು.


ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.


ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.


ನಾವು ಧೈರ್ಯಶಾಲಿಗಳಾಗಿದ್ದು ಅಂಜದೆ ನಮ್ಮ ಜನರಿಗಾಗಿಯೂ ನಮ್ಮ ದೇವರ ಪಟ್ಟಣಗಳಿಗಾಗಿಯೂ ಯುದ್ಧಮಾಡೋಣ. ಯೆಹೋವನು ತನ್ನ ಚಿತ್ತದಂತೆ ನಮ್ಮನ್ನು ನಡೆಸಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು