1 ಸಮುಯೇಲ 30:1 - ಪರಿಶುದ್ದ ಬೈಬಲ್1 ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |
ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.