Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:14 - ಪರಿಶುದ್ದ ಬೈಬಲ್‌

14 ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:14
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.


ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ನಗರವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.


ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.


ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.


ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲಿಂದ?” ಎಂದು ಕೇಳಿದನು. ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟುಹೋದನು.


ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು