17 ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.
17 ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
17 ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
17 ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.
ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.
ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.