1 ಸಮುಯೇಲ 30:20 - ಪರಿಶುದ್ದ ಬೈಬಲ್20 ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಈ ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನು ತೆಗೆದುಕೊಂಡನು. ಅವನ ಜನರು - ಇವು ದಾವೀದನ ಕೊಳ್ಳೆ ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.