1 ಸಮುಯೇಲ 30:22 - ಪರಿಶುದ್ದ ಬೈಬಲ್22 ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮುರ್ಖರೂ ಆದ ಕೆಲವು ಮಂದಿ - ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವದಿಲ್ಲ. ತಮ್ಮತಮ್ಮ ಹೆಂಡರುಮಕ್ಕಳನ್ನು ಕರಕೊಂಡು ಹೋಗಿಬಿಡಲಿ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.