1 ಸಮುಯೇಲ 30:25 - ಪರಿಶುದ್ದ ಬೈಬಲ್25 ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದಾವೀದನು ಇಸ್ರಾಯೇಲ್ಯರಲ್ಲಿ ಇದನ್ನು ಕಟ್ಟಳೆಯನ್ನಾಗಿ ನೇವಿುಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.