Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:26 - ಪರಿಶುದ್ದ ಬೈಬಲ್‌

26 ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:26
14 ತಿಳಿವುಗಳ ಹೋಲಿಕೆ  

ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.


ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಈ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಈ ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಈ ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು.


ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ.


ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು