ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.