1 ಸಮುಯೇಲ 30:6 - ಪರಿಶುದ್ದ ಬೈಬಲ್6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.