7 ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.