1 ಸಮುಯೇಲ 30:8 - ಪರಿಶುದ್ದ ಬೈಬಲ್8 ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.