1 ಸಮುಯೇಲ 31:1 - ಪರಿಶುದ್ದ ಬೈಬಲ್1 ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯ ಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು. ಅಧ್ಯಾಯವನ್ನು ನೋಡಿ |
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.