1 ಸಮುಯೇಲ 31:12 - ಪರಿಶುದ್ದ ಬೈಬಲ್12 ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು. ಅಧ್ಯಾಯವನ್ನು ನೋಡಿ |
ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.