1 ಸಮುಯೇಲ 31:3 - ಪರಿಶುದ್ದ ಬೈಬಲ್3 ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹುಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹುಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು. ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು. ಅಧ್ಯಾಯವನ್ನು ನೋಡಿ |
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.