Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:11 - ಪರಿಶುದ್ದ ಬೈಬಲ್‌

11 ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿ ಫೀನೆಹಾಸರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:11
10 ತಿಳಿವುಗಳ ಹೋಲಿಕೆ  

ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.


ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ.


ನಿನ್ನ ಸಂತತಿಯವರನ್ನೆಲ್ಲಾ ನಾಶಮಾಡುವ ಕಾಲವು ಬರುತ್ತಿದೆ. ನಿನ್ನ ಮನೆಯಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ.


ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.


“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು