1 ಸಮುಯೇಲ 4:13 - ಪರಿಶುದ್ದ ಬೈಬಲ್13 ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಶೀಲೋವಿಗೆ ಬಂದು ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖ ಧ್ವನಿಯನ್ನು ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು. ಅಧ್ಯಾಯವನ್ನು ನೋಡಿ |