Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:17 - ಪರಿಶುದ್ದ ಬೈಬಲ್‌

17 ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಏಲಿಗೆ - ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ಬೆನ್ನು ತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:17
8 ತಿಳಿವುಗಳ ಹೋಲಿಕೆ  

ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು.


ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.


ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.


ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಕುರ್ಚಿಯಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.


ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು.


ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು