Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:19 - ಪರಿಶುದ್ದ ಬೈಬಲ್‌

19 ಏಲಿಯ ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುಗಳ ವಶವಾದದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಈ ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆಯಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ದಿನತುಂಬಿದ ಗರ್ಭಿಣಿಯಾಗಿದ್ದು ದೇವರ ಮಂಜೂಷವು ಶತ್ರುವಶವಾದದ್ದನ್ನೂ ಮಾವನೂ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:19
7 ತಿಳಿವುಗಳ ಹೋಲಿಕೆ  

ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಕುರ್ಚಿಯಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.


ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.


ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.


ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.


ಆ ಸಮಯದಲ್ಲಿ, ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು