Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:4 - ಪರಿಶುದ್ದ ಬೈಬಲ್‌

4 ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:4
18 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.


ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.


ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.


“ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು