Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:10 - ಪರಿಶುದ್ದ ಬೈಬಲ್‌

10 ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:10
13 ತಿಳಿವುಗಳ ಹೋಲಿಕೆ  

ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಯೆಹೂದ್ಯರು ಗಾಜಾ ನಗರವನ್ನೂ ಅದರ ಸುತ್ತಮುತ್ತಲಿನ ಎಲ್ಲಾ ಸಣ್ಣ ಪಟ್ಟಣಗಳನ್ನೂ ಸ್ವಾಧೀನಪಡಿಸಿಕೊಂಡರು. ಯೆಹೂದ್ಯರು ಅಷ್ಕೆಲೋನ್ ಮತ್ತು ಎಕ್ರೋನ್ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಎಲ್ಲಾ ಸಣ್ಣಪುಟ್ಟ ಪಟ್ಟಣಗಳನ್ನೂ ಸಹ ಸ್ವಾಧೀನಪಡಿಸಿಕೊಂಡರು.


ಯೆಹೂದದ ಜನರು ಎಕ್ರೋನ್ ಪಟ್ಟಣವನ್ನು ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಪಡೆದುಕೊಂಡರು.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.


ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.


ಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು.


ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.


ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.


ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು