Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:3 - ಪರಿಶುದ್ದ ಬೈಬಲ್‌

3 ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡುವಾಗ ದಾಗೋನ್ ವಿಗ್ರಹ ಸರ್ವೇಶ್ವರನ ಮಂಜೂಷದ ಮುಂದೆ ಬೋರಲುಬಿದ್ದಿರುವುದನ್ನು ಕಂಡು ಅದನ್ನು ಪುನಃ ಅದರ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವದನ್ನು ಕಂಡು ಅದನ್ನು ಎತ್ತಿ ತಿರಿಗಿ ಅದರ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:3
17 ತಿಳಿವುಗಳ ಹೋಲಿಕೆ  

ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”


ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು.


ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.


ಕೈಗಳಿವೆ, ಆದರೆ ಯಾವುದನ್ನೂ ಮುಟ್ಟಲಾರವು. ಕಾಲುಗಳಿವೆ, ಆದರೆ ನಡೆಯಲಾರವು. ಅವುಗಳ ಗಂಟಲುಗಳಿಂದ ಶಬ್ದವೇ ಹೊರಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು