Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:8 - ಪರಿಶುದ್ದ ಬೈಬಲ್‌

8 ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್‍ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್‍ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:8
11 ತಿಳಿವುಗಳ ಹೋಲಿಕೆ  

ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.


ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.


ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.


ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.


ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.


ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.


ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.


ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.


ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು