Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:12 - ಪರಿಶುದ್ದ ಬೈಬಲ್‌

12 ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:12
7 ತಿಳಿವುಗಳ ಹೋಲಿಕೆ  

ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಆಮೇಲೆ ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಬಂಡಿಯ ಮೇಲಿಟ್ಟರು. ಅಲ್ಲದೆ ಚಿನ್ನದ ಗಡ್ಡೆಗಳನ್ನೂ ಇಲಿಗಳನ್ನೂ ಚೀಲದೊಳಗೆ ಹಾಕಿ ಬಂಡಿಯ ಮೇಲಿಟ್ಟರು.


ಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.


ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.


ಮಾಕಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್, ಬೇತ್‌ಹಾನಾನ್‌ಗಳಿಗೆ ಬೆನ್‌ದೆಕರನು ರಾಜ್ಯಪಾಲನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು